Oplus_0

ಸೆ.9 ರಂದು ಚಿತ್ತಾಪುರ ಸಾವಿರ ಮನೆಗಳ ಹಂಚಿಕೆ, ಫಲಾನುಭವಿಗಳು ಭಾಗವಹಿಸಲು ಮನವಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ನಾಗಾವಿ ದೇವಸ್ಥಾನದ ಹತ್ತಿರ ಸಾತನೂರು ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗಿರುವ 1000 ಜಿ+1 ಮನೆಗಳ ಹಂಚಿಕೆ (Randomisation) ಕಾರ್ಯಕ್ರಮವನ್ನು ಇದೇ ಸೆ.8 ರಂದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಿ ಸೆ.9 ರಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಫಲಾನುಭವಿಗಳ ಸಮ್ಮುಖದಲ್ಲಿ ನಡೆಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್, ಉಪಾಧ್ಯಕ್ಷೆ ಅತೀಯಾ ಬೇಗಂ ಹಾಗೂ ಎಲ್ಲ ಸದಸ್ಯರು, ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರಣ ಈಗಾಗಲೇ ಆಯ್ಕೆ ಆಗಿರುವ ಎಲ್ಲ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!