ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಶಾಸ್ತ್ರೀ ಪರಿವಾರದ ಕಾರ್ಯಕ್ರಮದಲ್ಲಿ ಭಾಗಿ: ಕರಬಸಯ್ಯ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ವೇದಮೂರ್ತಿ ಕರಬಸಯ್ಯ ಶಾಸ್ತ್ರೀ ನೇತೃತ್ವದಲ್ಲಿ ಫೆ.23 ರಂದು ಮಧ್ಯಾಹ್ನ 12.30 ಕ್ಕೆ ಹಮ್ಮಿಕೊಂಡಿದ್ದ ಶಾಸ್ತ್ರೀ ಪರಿವಾರದ ಶಾಲು ಮತ್ತು ಕಿರಗುಣಿ ಕಾರ್ಯಕ್ರಮದಲ್ಲಿ ಶತಮಾನದ ಸಂತ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ.
ಹೀಗಾಗಿ ಪಟ್ಟಣದ ಭಕ್ತಾದಿಗಳು ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಳ್ಳಬೇಕು ಎಂದು ಕರಬಸಯ್ಯ ಶಾಸ್ತ್ರೀ ಮನವಿ ಮಾಡಿದ್ದಾರೆ.
ಜೊತೆಗೆ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ಸೇಡಂ ಶ್ರೀ ಶಿವಶಂಕರ ಶಿವಾಚಾರ್ಯರು, ದಿಗ್ಗಾಂವ ಶ್ರೀ ಸಿದ್ದವೀರ ಶಿವಾಚಾರ್ಯರು, ಹಲಕರ್ಟಿ ಶ್ರೀ ಮುನೀಂದ್ರ ಶಿವಾಚಾರ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

