ಚಿತ್ತಾಪುರ ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿದ ಅವರು ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡದ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ್ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತಾಧಿಕಾರಿ ಮೈನೋದ್ದಿನ್, ವಿಠಲ್ ರಾವ್ ಸೇರಿದಂತೆ ಇತರರು ಇದ್ದರು.