Oplus_131072

ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಬುಧವಾರ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕರಿಸಲಾಯಿತು.

ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅಶ್ವಥ್ ನಾರಾಯಣ, ವಿಠಲ್ ರಾವ್ ಸೇರಿದಂತೆ ತಹಸೀಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!