ಚಿತ್ತಾಪುರ ತಾಲೂಕು ಆಡಳಿತ ವತಿಯಿಂದ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ, ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಗ್ಗೂಡಿ: ಕಮಕನೂರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕೋಲಿ ಸಮಾಜದಲ್ಲಿ ಇತ್ತಿಚಿನ ದಿನಗಳಲ್ಲಿ ವೈಯಕ್ತಿಕ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ, ತಮ್ಮ ಭಿನ್ನಾಭಿಪ್ರಾಯಗಳು ಬದಿಗಿಟ್ಟು ಎಲ್ಲರೂ ಒಗ್ಗೂಡಿ ಸಮಾಜದ ಸಂಘಟನೆಗೆ ಶ್ರಮಿಸಿ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.
ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತಿಚಿನ ದಿನಗಳಲ್ಲಿ ಕೋಲಿ ಸಮಾಜದ ಅಧ್ಯಕ್ಷ ಆಯ್ಕೆಯಾದ ನಂತರ ಎರಡು ಬಣಗಳಾಗಿದ್ದು ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗಿದ್ದು, ಆದರೂ ಸಮಾಜದ ಒಳಿತಿಗಾಗಿ ಎಲ್ಲರೂ ತಮ್ಮ ಭಿನ್ನಾಭಿಪ್ರಾಯಗಳು ಬಿಟ್ಟು ನಾವೇಲ್ಲರೂ ಒಂದೇ ಎಂದು ಭಾವಿಸಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಕೋಲಿ ಸಮಾಜದ ಕೆಲ ಪಂಗಡಗಳು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿದ್ದು ಇನ್ನುಳಿದ ಪಂಗಡಗಳನ್ನು ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಅಲ್ಲದೆ ನಮ್ಮ ಸಮಾಜಕ್ಕೆ ಮೀಸಲಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಪ್ರತಿಯೊಬ್ಬರ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ತಹಶೀಲ್ದಾರ ನಾಗಯ್ಯ ಹಿರೇಮಠ, ವಿಶೇಷ ಉಪನ್ಯಾಸಕರಾಗಿ ಚಂದ್ರಕಾಂತ ತಳವಾರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಬಿಜೆಪಿ ಮಂಡಲ ಅಧ್ಯಕ್ಷ ರವಿಂದ್ರ ಸಜ್ಜನಶೇಟ್ಟಿ, ಜಯಂತಿ ಸಮಿತಿ ಅಧ್ಯಕ್ಷರಾದ ಭೀಮಣ್ಣ ಸಾಲಿ, ಭೀಮಣ್ಣ ಶೀಬಾ, ಮಲ್ಲಯ್ಯ ಮುತ್ಯಾ ಅಲ್ಲೂರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ ಅಕ್ರಂ ಪಾಶಾ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಸಿಡಿಪಿಒ ಆರತಿ ತುಪ್ಪದ್, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಎಪಿಎಂಸಿ ಕಾರ್ಯದರ್ಶಿ ಸವಿತಾ ಗೋಣಿ, ಬಿಇಒ ಶಶಿಧರ್ ಬಿರಾದಾರ, ಬಿಸಿಯೂಟ ಅಧಿಕಾರಿ ಪ್ರಕಾಶ್ ನಾಯ್ಕೋಡಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ, ನಿಂಗಣ್ಣ ಹೆಗಲೇರಿ, ಮುಖಂಡರಾದ ಶರಣಪ್ಪ ನಾಟೀಕಾರ, ಅಣ್ಣಾರಾವ್ ಸಣ್ಣೂರಕರ್, ಜಯಪ್ರಕಾಶ ಕಮಕನೂರ, ರಾಮಲಿಂಗ ಬಾನರ್, ಹಣಮಂತ ಸಂಕನೂರ, ತಮ್ಮಣ್ಣ ಡಿಗ್ಗಿ, ಗುಂಡು ಐನಾಪುರ, ಬಸವರಾಜ ಚಿನ್ನಮಳ್ಳಿ, ಸಾಬಣ್ಣ ಡಿಗ್ಗಿ, ಜಗದೀಶ್ ಚವ್ಹಾಣ, ದೇವಿಂದ್ರ ಅರಣಕಲ್, ಕಾಶಪ್ಪ ಡೋಣಗಾಂವ, ಮಲ್ಲಿಕಾರ್ಜುನ ಅಲ್ಲೂರಕರ್, ದಶರಥ ದೊಡ್ಡಮನಿ, ಸಂತೋಷ ಇವಣಿ, ಶಿವುಕುಮಾರ ಸುಣಗಾರ, ಸಾಬಣ್ಣ ಭರಾಟೆ, ಶರಣು ಅರಣಕಲ್, ಮಹೇಶ್ ಸಾತನೂರು, ಅರುಣ್ ಯಾಗಾಪೂರ, ಗೂಳಿ ಡಿಗ್ಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪುರಸಭೆ ಸದಸ್ಯರು, ಸಮಾಜದ ಮುಖಂಡರು ಇದ್ದರು.