Oplus_0

ಚಿತ್ತಾಪುರ ತಾಲೂಕು ಆಡಳಿತ ವತಿಯಿಂದ ಗಣರಾಜ್ಯೋತ್ಸವ, ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳು ಪಾಲಿಸಿ: ಹಿರೇಮಠ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಭಾರತದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಕರ್ತವ್ಯಗಳನ್ನು ಪಾಲಿಸಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ತಹಸೀಲ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಸರ್ಕಾರ ನಡೆಯಲು ಸಂವಿಧಾನವೇ ಆಧಾರಸ್ತಂಭವಾಗಿದೆ ಹೀಗಾಗಿ ನಮ್ಮದು ಶ್ರೇಷ್ಠ ಸಂವಿಧಾನ ಆಗಿದೆ ಎಂದರು.

ಬಾಬಾಸಾಹೇಬ ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಈ ಮೂರು ಮೂಲಮಂತ್ರಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಮೊದಲು ಎಲ್ಲರೂ ಶಿಕ್ಷಣ ಪಡೆಯಬೇಕು ಶಿಕ್ಷಣದಿಂದಲೇ ಎಲ್ಲವೂ ಸಾಧ್ಯ ಎಂದರು.

ಸಿಪಿಐ ಚಂದ್ರಶೇಖರ ತಿಗಡಿ ಮಾತನಾಡಿ, ವಿಶ್ವದಲ್ಲಿಯೇ ಸರ್ವಶ್ರೇಷ್ಠ ಸಂವಿಧಾನ ಅದು ಭಾರತದ ಸಂವಿಧಾನ ಆಗಿದೆ. ರಾಜಪ್ರಭುತ್ವ ಕೊನೆಗಾಣಿಸಿ ಪ್ರಜಾಪ್ರಭುತ್ವ ಜಾರಿಗೆ ಬಂದಂತಹ ದಿನ ಹಾಗೂ ಎಲ್ಲಾ ಮಹನೀಯರನ್ನು ಸ್ಮರಿಸುವ ದಿನವಾಗಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿ, ಸಂವಿಧಾನಕ್ಕೆ ಎಲ್ಲರೂ ಗೌರವಿಸಬೇಕು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕುಗಳನ್ನು ಕಲ್ಪಿಸಲಾಗಿದೆ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸುವುದು ಅವಶ್ಯಕ. ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಎಲ್ಲರೂ ಬದ್ದರಾಗಬೇಕಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿದರು. ಪ್ರಾಧ್ಯಾಪಕ ಡಾ.ಅನೀಲಕುಮಾರ ಮಂಡೋಲಕರ್ ಉಪನ್ಯಾಸ ನೀಡಿದರು. ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಬಿಇಒ ಶಶಿಧರ ಬಿರಾದಾರ, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್, ತೋಟಗಾರಿಕೆ ಅಧಿಕಾರಿ ಶಂಕರಗೌಡ ಪಾಟೀಲ, ಅಕ್ಷರ ದಾಸೋಹ ಅಧಿಕಾರಿ ಪ್ರಕಾಶ್ ನಾಯ್ಕೋಡಿ, ಸಿಡಿಪಿಒ ಆರತಿ ತುಪ್ಪದ್, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ಪುರಸಭೆ ಸದಸ್ಯ ಜಗದೀಶ್ ಚವ್ಹಾಣ, ಶಿವಶರಣಪ್ಪ ಮಂಠಾಳೆ, ಮಲ್ಲಿಕಾರ್ಜುನ ಸೇಡಂ, ಅಶ್ವತ್ಥನಾರಾಯಣ, ವಿಠಲ್ ರಾವ್, ಸುಬಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ, ಸರ್ಕಾರಿ ನೌಕರರಿಗೆ, ಪೌರ ಕಾರ್ಮಿಕರಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಡಾ.ಶಂಕರ ಕಣ್ಣಿ ಸ್ವಾಗತಿಸಿದರು, ಸಂತೋಷ ಶಿರನಾಳ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!