ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಶಿವುಕುಮಾರ ಯಾಗಾಪೂರ ಆಯ್ಕೆ: ಬಸವರಾಜ ಪೊಲೀಸ್ ಪಾಟೀಲ ಭಾಗೋಡಿ ಹರ್ಷ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಕಾಟಂದೇವರಹಳ್ಳಿ ಗ್ರಾಮದ ಕೋಲಿ ಸಮಾಜದ ಯುವ ಮುಖಂಡ ಶಿವುಕುಮಾರ ಯಾಗಾಪೂರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಗುಂಡಗುರ್ತಿ ಭಾಗಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಾರ್ಯದರ್ಶಿ ಬಸವರಾಜ ಪೊಲೀಸ್ ಪಾಟೀಲ ಭಾಗೋಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪೇಟಶಿರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ ಶಿವುಕುಮಾರ ಯಾಗಾಪೂರ ಅವರು ಈ ಭಾಗದಲ್ಲಿ ಎಲ್ಲ ಸಮಾಜಗಳ ಮುಖಂಡರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದು ಜನಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಈಗ ಪ್ರಸ್ತುತ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಒಬ್ಬ ಯುವಕನನ್ನು ಗುರುತಿಸಿ ತಾಲೂಕು ಕೋಲಿ ಸಮಾಜದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕೋಲಿ ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹಾಗೂ ಸಮಾಜದ ಎಲ್ಲ ಮುಖಂಡರಿಗೆ ಅಭಿನಂದನೆಗಳು ಸಲ್ಲಿಸಿದ್ದಾರೆ.
ಶಿವುಕುಮಾರ ಯಾಗಾಪೂರ ಅವರ ನೇತೃತ್ವದಲ್ಲಿ ಚಿತ್ತಾಪುರ ತಾಲೂಕಿನಲ್ಲಿ ಕೋಲಿ ಸಮಾಜದ ಸಂಘಟನೆ ಬಲಿಷ್ಠವಾಗಲಿ ಎಂದು ಬಸವರಾಜ ಪೊಲೀಸ್ ಪಾಟೀಲ ಶುಭ ಹಾರೈಸಿದ್ದಾರೆ.