Oplus_0

ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ 

ಸರ್ಕಾರಿ ಶಾಲಾ ಶಿಕ್ಷಕರು ಕರ್ತವ್ಯ ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ: ಪಾಟೀಲ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸರ್ಕಾರಿ ಶಾಲಾ ಶಿಕ್ಷಕರು ಸಮಯ ಪರಿಪಾಲನೆ ಮಾಡಿ ಕಾಯಕ ನಿಷ್ಠೆ, ಕರ್ತವ್ಯ ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ ಚಿತ್ತಾಪುರ ಇವರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರ ಕೈಯಲ್ಲಿದೆ ಹೀಗಾಗಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಸೇವಾ ಭಾವನೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳೇ ಜಗತ್ತಿನಲ್ಲಿ ಇತಿಹಾಸ ಸೃಷ್ಟಿ ಮಾಡಿದ ಸಾಕಷ್ಟು ಉದಾಹರಣೆಗಳಿವೆ ಹೀಗಾಗಿ ಸರ್ಕಾರ ಶಾಲೆಯಲ್ಲಿ ಬಡವರ ಮಕ್ಕಳೇ ಹೆಚ್ಚು ಅಭ್ಯಾಸ ಮಾಡುತ್ತಾರೆ ಹೀಗಾಗಿ ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಿ ಎಂದರು.

ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಮಾಡಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ ಖಾಸಗಿ ಶಾಲೆಗೆ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆ ನಡುವೆ ಇರುವ ವ್ಯತ್ಯಾಸ ತಿಳಿದುಕೊಂಡು ಸರ್ಕಾರಿ ಶಾಲೆಯಲ್ಲಿನ ಕೊರತೆ ನಿವಾರಿಸುವ ರ್ಯಾಯ ವ್ಯವಸ್ಥೆ ಕಲ್ಪಿಸುವ ಅಧಿಕಾರ ಸ್ಥಳೀಯ ಬಿಇಒ ಅವರಿಗೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಇಒ ಶಶಿಧರ ಬಿರಾದಾರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ಬಸಪ್ಪ ಮುಗುಳಖೋಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ, ಗ್ಯಾರಂಟಿ ಯೋಜನೆ ಸದಸ್ಯ ಶರಣು ಡೋಣಗಾಂವ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಹೀರಾಲಾಲ್ ರಾಠೋಡ, ಗೀತಾ, ದೇವಿಂದ್ರರೆಡ್ಡಿ ದುಗನೂರ, ರವೀಂದ್ರ ರೆಡ್ಡಿ, ರಮೇಶ್ ಬೆಟಗೇರಿ, ಸಂತೋಷ ಕೋಮಟೆ, ಬಸಪ್ಪ ಯಂಬತ್ನಾಳ, ಅಬ್ದುಲ್ ಸಲೀಂ, ಸಿದ್ದಣ್ಣ ಹಡಪದ, ವೆಂಕಟೇಶ್ ಕೆ, ಲಾಲ್ ಅಹ್ಮದ್, ಬಸವರಾಜ ಹೊಸಮನಿ, ಮಲ್ಲಣ್ಣ ತಳವಾರ, ವೀರಭದ್ರಪ್ಪ ಪಾಟೀಲ, ಸಂತೋಷ ಸಲಗರ, ಆದಪ್ಪ ಬಗಲಿ, ಮಸ್ತಾನ್ ಪಟೇಲ್, ಅಂಬಾದಾಸ್, ಲಕ್ಷ್ಮಣ, ಶರಣಪ್ಪ ಐಕೂರ, ಗಂಗಾಧರ, ಯುಸುಫ್ ಖಾನ್, ಸುಮಂಗಲಾ ಸೇರಿದಂತೆ ಅನೇಕ ಶಿಕ್ಷಕರು ಉಪಸ್ಥಿತರಿದ್ದರು.

ಮರೇಪ್ಪ ಭಜಂತ್ರಿ ಪ್ರಾರ್ಥಿಸಿದರು, ಮಲ್ಲಿಕಾರ್ಜುನ ಸೇಡಂ ಸ್ವಾಗತಿಸಿದರು, ಪ್ರಕಾಶ್ ನಾಯ್ಕೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣಪ್ಪ ಅಬ್ಬಿಗೇರಿ ನಿರೂಪಿಸಿದರು.

“ಚಿತ್ತಾಪುರ ಕ್ಷೇತ್ರದ ಶಾಸಕರು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂ.ಡಿ.ಆರ್.ಎಸ್ ಶಾಲೆಗಳು ಮತ್ತು ವಿದ್ಯಾರ್ಥಿ ವಸತಿ ನಿಲಯಗಳು ನಿರ್ಮಿಸುವ ಮೂಲಕ ಶಾಲೆ ಬಿಟ್ಟ ಮಕ್ಕಳ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರಿಂದ ಇಂದು ಶೈಕ್ಷಣಿಕವಾಗಿ ಸುಧಾರಣೆ ಕಂಡಿದೆ”.-ನಾಗರೆಡ್ಡಿ ಪಾಟೀಲ ಕರದಾಳ ಕೆಪಿಸಿಸಿ ಸದಸ್ಯರು.

Spread the love

Leave a Reply

Your email address will not be published. Required fields are marked *

error: Content is protected !!