Oplus_0

ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ |  ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ: ಪಾಶಾ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಕ್ರೀಡಾಕೂಟದಲ್ಲಿ ಸಕ್ರೀಯವಾಗಿ ಭಾಗವಹಿಸುವುದು ಮುಖ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ ಹೇಳಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲಬುರಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ತೀರ್ಪುಗಾರರ ತೀರ್ಪು ಅಂತಿಮವಾಗಿರುತ್ತದೆ ಹೀಗಾಗಿ ಯಾರೂ ಅಪಸ್ವರ ಎತ್ತಬಾರದು ಎಂದು ಕಿವಿಮಾತು ಹೇಳಿದರು.

ದೈಹಿಕ ಹಾಗೂ ಮಾನಸಿಕ ವೃದ್ದಿಗೆ ಕ್ರೀಡೆಗಳು ಪೂರಕವಾಗಿದ್ದು, ಹೀಗಾಗಿ ಎಲ್ಲರೂ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಧ್ಯಾನಚಂದ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿಂದ್ರರೆಡ್ಡಿ ದುಗುನೂರ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಪ್ಪ ಗುರುಮಠಕಲ್, ತಾಪಂ ಎಡಿ ಪಂಡೀತ್ ಶಿಂಧೆ, ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿ, ಸಂಗಮೇಶ ಕುಂಬಿನ್, ಮಣಿಸಿಂಗ್ ಚವ್ಹಾಣ, ಲೋಹಿತ್ ಕಟ್ಟಿಮನಿ ವೇದಿಕೆಯಲ್ಲಿದ್ದರು.

ದೈಹಿಕ ಶಿಕ್ಷಕರಾದ ಭಾರತಿ, ವೆಂಕಟರೆಡ್ಡಿ, ಸುರೇಶ್ ರಾಂಪೂರೆ, ಶಿವುಕುಮಾರ ಸರಡಗಿ, ವೀರಭದ್ರಪ್ಪ ಪಾಟೀಲ, ಅಂಬರೀಷ್, ವಿಶ್ವನಾಥ ಕುಂಬಾರ, ವಿರೇಶ್, ಲಖನ್ ಸೇರಿದಂತೆ ಇತರರು ಇದ್ದರು. ಶ್ರೀನಾಥ್ ಹಲಕಟ್ಟಿ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!