ಚಿತ್ತಾಪುರ ಬಸವ ಜಯಂತಿ | ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ತಾಪುರ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ವತಿಯಿಂದ 893 ನೇ ಬಸವ ಜಯಂತಿ ಉತ್ಸವ ನಿಮಿತ್ತ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ಉದ್ಘಾಟಿಸಿದರು.
ಮೆಡಿಕೇರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಸುರೇಶ್ ಪಾಟೀಲ ಸಹಕಾರದೊಂದಿಗೆ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಮೂಳೆ ತಜ್ಞರು, ಲ್ಯಾಪರೋಸ್ಕೋಪಿಕ್, ಜನರಲ್ ಮೇಡಿಷನ್, ಮಹಿಳಾ ತಜ್ಞರು, ಕೀಲು ನೋವು, ಮಕ್ಕಳ ತಜ್ಞರು, ಕಿವಿ ಪರೀಕ್ಷೆ, ಮಧುಮೇಹ, ಕಣ್ಣಿನ ಪರೀಕ್ಷೆ, ರಕ್ತದ ಒತ್ತಡ, ಸೀಳು ತುಟಿಗಳು, ಚರ್ಮ ರೋಗಕ್ಕೆ ಸಂಬಂಧಿಸಿದಂತೆ 15 ರಿಂದ 20 ಜನ ನುರಿತ ವೈದ್ಯರ ತಂಡ, ಜನಸಾಮಾನ್ಯರ ಆರೋಗ್ಯ ವಿಚಾರಿಸಿ ಸೂಕ್ತ ಮಾರ್ಗದರ್ಶನ, ಉಚಿತ ಔಷಧಿ ನೀಡಿ ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಯಿತು.
ಜನರು ಶಿಬಿರದ ಸದುಪಯೋಗ ಸಂಪೂರ್ಣವಾಗಿ ಪಡೆದುಕೊಂಡರು. ಬಸವ ಜಯಂತಿ ಸಮಿತಿ ವತಿಯಿಂದ ತಂಪಾದ ಕುಡಿಯುವ ನೀರು ಹಾಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ, ಮೇಡಿಕೇರ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸುರೇಶ್ ಪಾಟೀಲ, ಹೆಬ್ಬಾಳ ದೃಷ್ಟಿ ಕೇಂದ್ರದ ಮುಖ್ಯಸ್ಥ ಡಾ.ಸಂತೋಷ ಪಾಟೀಲ ಹೆಬ್ಬಾಳ, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಅಧ್ಯಕ್ಷ ನಾಗರಾಜ ಭಂಕಲಗಿ, ಮುಖಂಡರಾದ ಸೋಮಶೇಖರ ಪಾಟೀಲ ಬೆಳಗುಂಪಾ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ವೀರಣ್ಣಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ಮಲ್ಲಿಕಾರ್ಜುನ ಕಾಳಗಿ, ನೀಲಕಂಠ ಪಾಟೀಲ, ಅಶೋಕ ನಿಪ್ಪಾಣಿ, ಚಂದ್ರುಗೌಡ ಬೆಳಗುಂಪಾ, ಆನಂದ ಪಾಟೀಲ ನರಿಬೋಳ, ಅನಿಲ್ ವಡ್ದಡಗಿ, ದೇವಿಂದ್ರ ಅರಣಕಲ್, ಮಲ್ಲರೆಡ್ಡಿ ಗೋಪಸೇನ್, ಶಾಂತಣ್ಣ ಚಾಳೀಕಾರ, ನಾಗರಾಜ ಕಡಬೂರ, ಓಂಕಾರ ರೇಷ್ಮಿ, ನೇಹಲ್ ಪಾಟೀಲ, ಎಸ್.ಎನ್.ಪಾಟೀಲ, ಅಂಬರೀಷ್ ಸುಲೇಗಾಂವ, ಮಹಾದೇವ ಅಂಗಡಿ, ಸಂತೋಷ ಹಾವೇರಿ, ವಿಶ್ವನಾಥ ಕುಂಬಾರ, ರಮೇಶ್ ಕಾಳನೂರ, ತಾಲೂಕು ಮಟ್ಟದ ಅಧಿಕಾರಿಗಳು, ನುರಿತ ವೈದ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

