ಚಿತ್ತಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಗದೇವ ಕುಂಬಾರ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಕದ್ದರಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಜಗದೇವ ಎಸ್ ಕುಂಬಾರ ಶೈಕ್ಷಣಿಕ ರಂಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿದ್ದಾರೆ, ಸದರಿಯವರ ಸೇವೆ ಶ್ಲಾಘನೀಯವಾಗಿದ್ದು, ಇವರ ಅನುಪಮ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹಾಗೂ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೋಮಪ್ಪ ದಂಡಗುಂಡ ಅವರು ತಿಳಿಸಿದ್ದಾರೆ.
ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ.13 ರಂದು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘ ತಾಲೂಕ ಘಟಕ, ಚಿತ್ತಾಪುರ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

