Oplus_0

ಚಿತ್ತಾಪುರ ಕ್ಷೇತ್ರದ ವಿವಿಧ ಪ್ರೌಢ ಶಾಲೆಗಳಿಗೆ ಜಿಪಂ ಸಿಇಒ ಭಂವರಸಿಂಗ್ ಮೀನಾ ಭೇಟಿ | ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಮಕ್ಕಳೊಂದಿಗೆ ಚರ್ಚೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ದತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ, ಸರ್ಕಾರಿ ಪ್ರೌಢ ಶಾಲೆ ಪೇಠಶಿರೂರ, ಬಾಲಕರ ಪ್ರೌಢ ಶಾಲೆ ಶಹಾಬಾದ ಹಾಗೂ ಸರ್ಕಾರಿ ಪ್ರೌಢ ಶಾಲೆ ಮರತೂರ ಶಾಲೆಗಳಿಗೆ ಶುಕ್ರವಾರ ಕಲಬುರಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ ಭೇಟಿ ನೀಡಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬರಲು ಕಾರಣ ಮತ್ತು ಫಲಿತಾಂಶ ಹೆಚ್ಚಳ ಮಾಡಲು ಅಗತ್ಯ ಸಲಹೆ ನೀಡಿ ಮಕ್ಕಳೊಂದಿಗೆ ಮಾತನಾಡಿದ ಅವರು, ಯಾವ ವಿಷಯದಲ್ಲಿ ಕಲಿಕೆಗೆ ತೊಂದರೆ ಕುರಿತು ಚರ್ಚಿಸಿದರು ಹಾಗೂ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಎಂದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಅರಿವೆ ಗುರು ಎಂಬ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ಉತ್ತರಗಳನ್ನು ಒಳಗೊಂಡ ಪುಸ್ತಕ ಅದರ ಬಳಕೆ ಮತ್ತು ಅಗತ್ಯತೆ ಕುರಿತು ಚರ್ಚಿಸಿ ಮಾರ್ಗದರ್ಶನ ನೀಡಿದರು.

ಶಹಾಬಾದ ಹಾಗೂ ಮರತೂರ ಶಾಲೆಯಲ್ಲಿ ಬಿಸಿಯೂಟ ಸಿದ್ದತೆ ಪರಿಶೀಲಿಸಿ ಆಹಾರಧಾನ್ಯಗಳ ಗುಣಮಟ್ಟ ಪರಿಶೀಲಿಸಿ, ಸರ್ಕಾರಿ ಪ್ರೌಢ ಶಾಲೆ ಮರತೂರಲ್ಲಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಮಾಡಿದರು. ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡುವ ಬಗ್ಗೆ ವಿಚಾರಿಸಿದರು ಹಾಗೂ ಮೊಟ್ಟೆ ತಿನ್ನದೆ ಇರುವ ಮಕ್ಕಳಿಗೆ ಮೊಟ್ಟೆಯ ಪೌಷ್ಟಿಕಾಂಶ ಬಗ್ಗೆ ತಿಳಿಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಸೇರಿದಂತೆ ಶಿಕ್ಷಕರು ಹಾಜರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!