ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಬ್ಯಾಂಕ್ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಲು ಪಿಎಸ್ಐ ಚಂದ್ರಾಮಪ್ಪ ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ವಿವಿಧ ಬ್ಯಾಂಕ್ ಗಳ ಗ್ರಾಹಕರ ಹಾಗೂ ಸಿಬ್ಬಂದಿಗಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಬೇಕು ಎಂದು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಚಂದ್ರಮಪ್ಪ ಕರೆ ನೀಡಿದರು.
ಪಟ್ಟಣದ ಎಸ್.ಬಿ.ಐ, ಕೆನರಾ ಬ್ಯಾಂಕ್, ಎಸ್.ಬಿ.ಎಚ್, ಸೇರಿದಂತೆ ಎಲ್ಲಾ ಬ್ಯಾಂಕುಗಳಿಗೆ ಬೇಟಿ ನೀಡಿದ ಅವರು, ಬ್ಯಾಂಕಿಗೆ ಸಂಬಂಧಪಟ್ಟ ಅಪರಾಧಗಳನ್ನು ತಡೆಯುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿ ಹೇಳಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.