ಚಿತ್ತಾಪುರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ದೇವಿಂದ್ರ ಯಾಬಾಳ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಚಿತ್ತಾಪುರ ಮತಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವಿಂದ್ರ ಯಾಬಾಳ ದಿಗ್ಗಾಂವ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಮತ್ತು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸನ್ಮಾನಿಸಿ ಸಿಹಿ ತಿನ್ನಿಸುವ ಮೂಲಕ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಸಂಜಯ ಬುಳಕರ್, ಮುಖಂಡರಾದ ಸುನೀಲ್ ದೊಡ್ಡಮನಿ, ಶರಣು ಡೋಣಗಾಂವ, ಮಲ್ಲಿಕಾರ್ಜುನ ಹೊನ್ನಪೂರ, ಶಿವಶರಣ ಮೆಂಗಾ, ಮೌನಗಂಗಾಧರ ಡಿಗ್ಗಿ, ಜಗದೀಶ್ ಚವ್ಹಾಣ, ಹಣಮಂತ ಸಂಕನೂರ, ವಿಜಯಕುಮಾರ್ ಯಾಗಾಪೂರ ಸೇರಿದಂತೆ ಅನೇಕರು ಇದ್ದರು.