ಚಿತ್ತಾಪುರದಲ್ಲಿ ದಿ. 7 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯ ನಿವಾರಣೆ ಕಾರ್ಯಾಗಾರ: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಬಜಾಜ್ ಕಾಂಪ್ಲೇಕ್ಸ್ ಕೆಳಮಹಡಿ ಮಿನಿ ಕಲ್ಯಾಣ ಮಂಟಪದಲ್ಲಿ ದಿ.7 ರಂದು ಬೆಳಗ್ಗೆ 9.30 ಕ್ಕೆ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಚಿತ್ತಾಪುರ ಇವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯ ನಿವಾರಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಅಧ್ಯಕ್ಷ ಕಾಶಿನಾಥ ಗುತ್ತೇದಾರ ತಿಳಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಉದ್ಘಾಟಿಸಲಿದ್ದಾರೆ ಹಾಗೂ ಪಿಎಸ್ಐ ಮಂಜುನಾಥ ರೆಡ್ಡಿ ಪರೀಕ್ಷಾ ಟಿಪ್ಸ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಉಪನ್ಯಾಸಕರಾಗಿ ಕಲಬುರಗಿ ಶಿಕ್ಷಣ ತಜ್ಞ ಕೆ.ಎಂ.ವಿಶ್ವನಾಥ ಮರತೂರ (ಪರೀಕ್ಷೆ ಒಂದು ಹಬ್ಬದಂತೆ ಸಂಭ್ರಮಿಸಿ), ಇಂಗಳಗಿ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಸಪ್ಪ ಮುಗಳಖೋಡ (ಇಂಗ್ಲೀಷ್ ವಿಷಯ), ರಾವೂರ ಕೆಪಿಎಸ್ ಶಾಲೆಯ ಸಹ ಶಿಕ್ಷಕ ಉದಯಕುಮಾರ ಇಂಗಳೆ (ಗಣಿತ ವಿಷಯ), ಔರಾದ್.ಬಿ ಕೆಪಿಎಸ್ ಶಾಲೆಯ ಸಹ ಶಿಕ್ಷಕ ರಾಜೇಶ್ ನಾಗೂರೆ (ವಿಜ್ಞಾನ ವಿಷಯ) ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿತ್ತಾಪುರ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು ಕಾಶಿರಾಯ ಕಲಾಲ್, ಸರಕಾರಿ ಕನ್ಯಾ ಪ್ರೌಢ ಶಾಲೆಯ ಮುಖ್ಯಗುರು ಮಲ್ಲಪ್ಪ ಚೆನ್ನಮಲ್ಲಪ್ಪ, ಎನ್.ಇ.ಎಸ್ ಪ್ರೌಢ ಶಾಲೆಯ ಮುಖ್ಯಗುರು ಪ್ರಕಾಶ ಪಾಟೀಲ, ಮಹಾತ್ಮ ಗಾಂಧಿ ಪ್ರೌಢ ಶಾಲೆಯ ಮುಖ್ಯಗುರು ರಮೇಶ ಬಟಗೇರಿ, ಹಾಸ್ಯ ಕಲಾವಿದ ರಾಚಯ್ಯಸ್ವಾಮಿ ಖಾನಾಪೂರ ಭಾಗವಹಿಸಲಿದ್ದಾರೆ ಹೀಗಾಗಿ ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

