Oplus_0

ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ | ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಕೊಡುಗೆ ಅಪಾರ: ಹಿರೇಮಠ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮೌಢ್ಯತೆ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್ ಅವರು, ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅವರ ಕೊಡುಗೆ ಅಪಾರವಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕ‌ರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅಂಬೇಡ್ಕ‌ರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಹಾಯಕ ನಿರ್ದೇಶಕ ಪಂಡಿತ್ ಶಿಂಧೆ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ಪುರಸಭೆ ಮಾಜಿ ಅಧ್ಯಕ್ಷರಾದ ಶಿವಕಾಂತ ಬೆಣ್ಣೂರಕರ್, ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಪಾಶಾಮಿಯ್ಯಾ ಖುರೇಷಿ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್, ಜಿಲ್ಲಾ ಖಜಾಂಚಿ ದೇವಿಂದ್ರ ಕುಮಸಿ,  ರಾಜಪ್ಪ ಹುಂಡೇಕಾರ, ಮಹೇಶ್ ಜಾಯಿ, ನಾಗಪ್ಪ ಕಲ್ಲಕ್, ಸಂಜಯ್ ಬುಳಕರ್, ನಾಗೇಂದ್ರ ಬುರ್ಲಿ, ಲೋಹಿತ್ ಮುದ್ದಡಗಿ, ರಾಜಣ್ಣ ಕರದಾಳ, ಬಸವರಾಜ ಕೆಬಿ, ಮಹಾಂತೇಶ್ ಬೊಮ್ಮನಳ್ಳಿ, ಬಸವರಾಜ ಮುಡಬೂಳಕರ್, ವಿಜಯಕುಮಾರ್ ದೊಡ್ಡಮನಿ, ಪ್ರಭು ಗಂಗಾಣಿ, ಶ್ಯಾಮ್ ಮೇಧಾ, ಲಕ್ಷ್ಮೀಕಾಂತ ಸಾಲಿ, ಶಿವಮೂರ್ತಿ ಪಾಮನೂರ, ಸುಭಾಷ್ ಕಲ್ಮರಿ, ಕಾರ್ತಿಕ್ ಕಲ್ಲಕ್, ಶರಣು ಕೋರವಾರ ಸೇರಿದಂತೆ ಇತರರು ಇದ್ದರು. ಪುರಸಭೆ ಅಧಿಕಾರಿ ವಿಠಲ್ ಹಾದಿಮನಿ ಬುದ್ಧ ವಂದನೆ ಸಲ್ಲಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!