Oplus_131072

ಚಿತ್ತಾಪುರದಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು, ಮುಗಿಲು ಮುಟ್ಟಿದ ಆಕ್ರಂದನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕುರಿ ಕಾಯಲು ಹೋಗಿದ್ದ ಇಬ್ಬರು ಬಾಲಕರು ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಗುರುವಾರ ಪಟ್ಟಣದ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ನಡೆದಿದೆ. ಮಕ್ಕಳ ದುರಂತ ಸಾವನ್ನು ಕಂಡು ಪಾಲಕ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೃತರನ್ನು ವಡ್ಡರ ಗಲ್ಲಿಯ ಕುಶಾಲ್ ಚನ್ನಪ್ಪ (8), ರಾಜು ಚನ್ನಪ್ಪ (14) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ, ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ ಎನ್ನಲಾಗಿದೆ.

ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ತಹಸೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿ ವಿಜಯ ಕುಮಾರ, ಸವಿಕುಮಾರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Leave a Reply

Your email address will not be published. Required fields are marked *

error: Content is protected !!