ಚಿತ್ತಾಪುರದಲ್ಲಿ ನಾಳೆ ನಡೆಯಲಿರುವ ಕಾರ್ಯಕ್ರಮದ ವೇದಿಕೆ ಹಾಗೂ ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯ ಸೇಂದಿ ಡಿಪೋ ಮೈದಾನದಲ್ಲಿ ಭಾನುವಾರ ನಡೆಯಲಿರುವ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ದತೆಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ವೀಕ್ಷಸಿದರು.

ಅಂದಾಜು ರೂ.1069 ಕೋಟಿ ವೆಚ್ಚದ ಯೋಜನೆಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಲಿದ್ದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ನೆರವೇರಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉಪಸ್ಥಿತರಿರಲಿದ್ದಾರೆ.

ಶಾಸಕರು, ಎಂ ಎಲ್ ಸಿ ಗಳು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಹಲವರು ಭಾಗವಹಿಸಲಿದ್ದು, ವೇದಿಕೆ, ಊಟದ ಸ್ಥಳ ಸೇರಿದಂತೆ ಆಸನ ವ್ಯವಸ್ಥೆಯನ್ನು ಸಚಿವರು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರಸಿಂಗ್ ಮೀನಾ, ಎಸ್ ಪಿ, ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ರಮೇಶ್ ಮರಗೋಳ, ನಾಗರೆಡ್ಡಿ ಪಾಟೀಲ ಕರದಾಳ, ಸುನೀಲ್ ದೊಡ್ಡಮನಿ, ಚಂದ್ರಶೇಖರ ಕಾಶಿ, ಮುಕ್ತಾರ್ ಪಟೇಲ್, ನಾಗಯ್ಯ ಗುತ್ತೇದಾರ, ಮನ್ಸೂರ್ ಪಟೇಲ್, ಎಂ.ಎ.ರಷೀದ್, ಜಯಪ್ರಕಾಶ್ ಕಮಕನೂರ, ಶಿವರಾಜ್ ಕಲಗುರ್ತಿ ಸೇರಿದಂತೆ ಹಲವರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!