ಚಿತ್ತಾಪುರದಲ್ಲಿ ನಾಳೆ ಉಚಿತ ನೇತ್ರ, ಆರೋಗ್ಯ ತಪಾಸಣೆ ಶಿಬಿರ: ದಿಗ್ಗಾಂವಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ದಿಗ್ಗಾಂವಕರ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನ. 22 ರಂದು ಶನಿವಾರ ಬೆಳಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ಉಚಿತವಾಗಿ ನೇತ್ರ ತಪಾಸಣೆ ಹಾಗೂ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿಯ ಯುನೈಟೆಡ್ ಆಸ್ಪತ್ರೆ, ಕುರಾಳ್ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ, ಯಶೋಧ ಮಕ್ಕಳ ಆಸ್ಪತ್ರೆ ಹಾಗೂ ಯಾದಗಿರಿಯ ವೇಧ ಕಣ್ಣಿನ ಆಸ್ಪತ್ರೆಯ ನುರಿತ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ನೇತ್ರ ತಪಾಸಣೆ ಶಿಬಿರದಲ್ಲಿ ಕಣ್ಣಿನ ಗಂಭೀರ ಸಮಸ್ಯೆ ಇರುವವರಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗುವವರಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗವನ್ನು ತಾಲ್ಲೂಕಿನ ಸಾರ್ವಜನಿಕರು ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

