Oplus_0

ಚಿತ್ತಾಪುರ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ ಮೆರವಣಿಗೆ: ಶಾಮರಾಯ ಸಂಗಾವಿ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಹಾನಿಯಾದ ರೈತರಿಗೆ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾಳಾಗಿದ್ದು ಈಗಾಗಲೇ ಸರ್ಕಾರ ಘೋಷಿಸಿದ ಎನ್.ಡಿ.ಆರ್.ಎಪ್ ಹಾಗೂ ಎಸ್.ಡಿ.ಆರ್.ಎಫ್ ಹಣವನ್ನು ಕೂಡಲೇ ರೈತರ ಖಾತೆಗೆ ಜಮಾ ಮಾಡಬೇಕು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ತೊಗರಿ ಖರೀದಿಗೆ ನೊಂದಣಿ ಪ್ರಾರಂಭ ಮಾಡಿ ಜನೇವರಿಯಲ್ಲಿ ತೊಗರಿ ಖರೀದಿಯನ್ನು ಪ್ರತಿ ಕ್ವಿಂಟಾಲಗೆ 12400 ಯಂತೆ ದರ ನಿಗದಿಪಡಿಸಿ ಖರೀದಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ (ನ.19) ನಾಳೆ ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೂಡಿಹಳ್ಳಿ ಚಂದ್ರಶೇಖರ ಬಣ) ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಶಾಮರಾಯ ಸಂಗಾವಿ ತಿಳಿಸಿದ್ದಾರೆ.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗುವ ಪ್ರತಿಭಟನೆ ಮೆರವಣಿಗೆ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ತಾಲೂಕು ಪಂಚಾಯತ್ ಕಚೇರಿ ರಸ್ತೆಯ ಮೂಲಕ ಪ್ರಜಾ ಸೌಧ ಕ್ಕೆ ತಲುಪಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು, ಆದ್ದರಿಂದ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!