Oplus_0

ಚಿತ್ತಾಪುರದಲ್ಲಿ ನಾಳೆ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಜನ್ಮದಿನದ ನಿಮಿತ್ತ ಅನ್ನಸಂತರ್ಪಣೆ: ರವಿ ಇವಣಿ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಅಕ್ಷರ ಮಾಂತ್ರಿಕ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಜನ್ಮ ದಿನವನ್ನು ಮಾ.16 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಭಿಮಾನಿ ಬಳಗದ ರವಿ ಇವಣಿ ತಿಳಿಸಿದ್ದಾರೆ.

ಪಟ್ಟಣದ ಭುವನೇಶ್ವರಿ ವೃತ್ತದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಿದ್ದ ಜನ್ಮದಿನದ ಸಮಾರಂಭದಲ್ಲಿ ಕಸವಿಲೇವಾರಿ ಮಾಡುವ ಪುರಸಭೆ ವಾಹನಗಳ ಚಾಲಕರಿಗೆ ಮತ್ತು ನಳ ಬಿಡುವ ಕಾರ್ಮಿಕರಿಗೆ ಗೌರವ ಸನ್ಮಾನ ಮಾಡಲಾಗುವುದು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ರವಿ ಬೆಳಗೆರೆ ಅವರ ಅಭಿಮಾನಿಗಳು ಹಾಗೂ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!