ಚಿತ್ತಾಪುರದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನಾಚರಣೆ, ಸಿನೇಮಾ ರಂಗಕ್ಕೆ, ಸಮಾಜ ಸೇವೆಗೆ ಪುನೀತ್ ರಾಜಕುಮಾರ್ ಆದರ್ಶ: ಕಟ್ಟಿಮನಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ಸಿನೇಮಾ ರಂಗಕ್ಕೆ ಹಾಗೂ ಸಮಾಜ ಸೇವೆಗೆ ಪುನೀತ್ ರಾಜಕುಮಾರ್ ಆದರ್ಶ ರಾಗಿದ್ದಾರೆ ಎಂದು ಭೋವಿ ವಡ್ಡರ್ ಮಹಾಸಭಾ ಕಲ್ಯಾಣ ಕರ್ನಾಟಕ ಉಪಾಧ್ಯಕ್ಷ ವಿಠ್ಠಲ್ ಕಟ್ಟಿಮನಿ ಹೇಳಿದರು.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ ಭೋವಿ ವಡ್ಡರ ಮಹಾಸಭಾ ತಾಲೂಕ ಅಧ್ಯಕ್ಷ ವೆಂಕಟೇಶ್ ಹರವಾಳ ನೇತೃತ್ವದಲ್ಲಿ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಗು ಮುಖದ ಒಡೆಯ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರು ಸಿನೇಮಾದಲ್ಲಿ ಹಾಗೂ ನಿಜ ಜೀವನದಲ್ಲಿಯೂ ಅವರು ಹೀರೋ ಆಗಿದ್ದರು ಎಂದು ಹೇಳಿದರು.
ಕಲಾವಿದ ಬಾಬು ಕಾಶಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲೇ ಬಾಲ ನಟನಾಗಿ ಅಭಿನಯಿಸಿ ನಂತರ ನಾಯಕ ನಟನಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಸಿನೇಮಾ ಮಾಡಿದ ಪುನೀತ್ ರಾಜಕುಮಾರ್ ಅವರು ಚಿತ್ರ ರಂಗಕ್ಕೆ ಸಲ್ಲಿಸಿದ ಸೇವೆ ಅಮೋಘವಾಗಿದೆ ಹಾಗೂ ಎಲೆಮರೆ ಕಾಯಿಯಂತೆ ಸಲ್ಲಿಸಿದ ಸಮಾಜ ಸೇವೆ ಮೆಚ್ಚುವಂಥದ್ದು ಇಂತಹ ಅಪರೂಪದ ಚಿತ್ರನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಲಾಡ್ಜಿಂಗ್ ಕ್ರಾಸ್ ಗೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಕೇಕ್ ಕತ್ತರಿಸಿದರು. ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಸದಸ್ಯ ವಿನೋದ ಗುತ್ತೇದಾರ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ದತ್ತು ಜಾನೆ, ಮಂಜುನಾಥ್ ಕಾಶಿ, ಅಂಕುಶ್ ಕಾಶಿ, ಕಾಶಿ ವಡ್ಡರ ಸಮಾಜದ ಅಧ್ಯಕ್ಷ ರಾಜೇಶ್ ಕಾಶಿ, ಪ್ರಮುಖರಾದ ರವಿ ಇವಣಿ, ಕಾಶಿನಾಥ ಗುತ್ತೇದಾರ, ತಿಮ್ಮಯ್ಯ ಬೋಸಗಿ, ರವಿ ವಿಟ್ಕರ್, ಆನಂದ್ ಗುತ್ತೇದಾರ, ನಾಗು ಕಲ್ಲಕ್, ತಿಮ್ಮಯ್ಯ ಪವರ್, ರಾಮು ಹರವಾಳ, ರಮೇಶ್ ಬೋಸಗಿ, ಮಧುಸೂದನ್ ಕಾಶಿ, ಚಂದ್ರಶೇಖರ್ ಬಿಎಸ್ಏನ್ಎಲ್, ವೆಂಕಟೇಶ್ ಕಲಬುರಗಿಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

