ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ, ಬಡ ಹೆಣ್ಣುಮಕ್ಕಳಿಗೆ ಸೀರೆ ವಿತರಣೆ ಹಾಗೂ ಅನ್ನ ಸಂತರ್ಪಣೆ  | ಪ್ರಿಯಾಂಕ್ ಖರ್ಗೆ ಅಭಿವೃದ್ಧಿಯ ಹರಿಕಾರರು: ಕಂಬಳೇಶ್ವರ ಶ್ರೀ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಗೃಹ, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಭಿವೃದ್ಧಿಯ ಹರಿಕಾರರು ಎಂದು ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ಅವರು ಭಾನುವಾರ ಆಯೋಜಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಹೆಣ್ಣುಮಕ್ಕಳಿಗೆ ಸೀರೆ ವಿತರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಸಚಿವರಾದ ಮೇಲೆ ಚಿತ್ತಾಪುರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸಿದ್ದಾರೆ ಎಂದರು. ರಾಜ್ಯದಲ್ಲಿಯೇ ಪ್ರಿಯಾಂಕ್ ಖರ್ಗೆ ಪ್ರಭಾವಿ ಸಚಿವರಾಗಿದ್ದಾರೆ ಎಂದು ಬಣ್ಣಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪಂಚ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಶಿವಕಾಂತ್ ಬೆಣ್ಣೂರಕರ್, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ರಾಮಲಿಂಗ ಬಾನರ್, ಭೀಮರಾಯ ಹೊತಿನಮಡಿ, ಮಲ್ಲಿಕಾರ್ಜುನ ಮುಡಬೂಳಕರ್, ದೇವು ಯಾಬಾಳ, ಶ್ರೀಕಾಂತ್ ಸಿಂಧೆ, ಮೋಹನ್ ಬೆಂಜಿ, ರಾಜಣ್ಣ ಕರದಾಳ, ಬಸವರಾಜ ಕೆಬಿ, ರಾಜು ಬುಳಕರ್, ಲೋಹಿತ್ ಮುದ್ದಡಗಿ, ಜಗನ್ನಾಥ ಮುಡಬೂಳಕರ್, ಆನಂದ ರಾವೂರಕರ್, ವಿಠಲ್ ಕಟ್ಟಿಮನಿ, ಬಸವರಾಜ ಮುಡಬೂಳಕರ್, ಸಾಬಣ್ಣ ಡಿಗ್ಗಿ, ಚೆನ್ನವೀರ ಕಣಗಿ, ನಿಂಬಣ್ಣಗೌಡ ಪಾಟೀಲ, ಮಹಾದೇವ ರಾಠೋಡ, ಕಾರ್ತಿಕ್ ಕಲ್ಲಕ್, ಭರತ್ ಹುಂಡೇಕಾರ, ಗಂಗಾಧರ ಡಿಗ್ಗಿ, ಶರಣು ತಲಾಟಿ, ಶಿವಕುಮಾರ ಯಾದಗಿರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಸಚಿವ ಪ್ರಿಯಾಂಕ್ ಖರ್ಗೆ ಅವರ ಆಶಯದಂತೆ ಬಡ, ನಿರ್ಗತಿಕ ಮಹಿಳೆಯರಿಗೆ ಸೀರೆ ವಿತರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡಲಾಗಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ಖರ್ಚು ಮಾಡುವ ಹಣವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸಲಾಗಿದೆ. ಇದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ”.- ಮಲ್ಲಿಕಾರ್ಜುನ ಬೆಣ್ಣೂರಕರ್ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಉಪಾಧ್ಯಕ್ಷರು.

Spread the love

Leave a Reply

Your email address will not be published. Required fields are marked *

You missed

error: Content is protected !!