ಚಿತ್ತಾಪುರದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಅದ್ದೂರಿ ಮೆರವಣಿಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕು ಆಡಳಿತ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಪ್ರಜಾ ಸೌಧದಿಂದ ಪ್ರಾರಂಭವಾದ ಮೆರವಣಿಗೆ ಸ್ಟೇಷನ್ ರಸ್ತೆ, ನಾಗಾವಿ ವೃತ್ತ, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಪುನಃ ಪ್ರಜಾ ಸೌಧದ ವೇದಿಕೆಗೆ ತಲುಪಿತು.
ಮೆರವಣಿಗೆಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರದ ಜೊತೆಗೆ ರಾಷ್ಟ್ರಧ್ವಜಗಳು ರಾರಾಜಿಸಿದವು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಪಕ್ಷಗಳ ಮುಖಂಡರು ಹಾಗೂ ಶಾಲಾಕಾಲೇಜುಗಳ ಮಕ್ಕಳು ಭಾಗವಹಿಸಿದ್ದರು.
ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮೆರವಣಿಗೆಗೆ ಚಾಲನೆ ನೀಡಿದರು. ತಹಸೀಲ್ದಾರ್ ನಾಗಯ್ಯ ಹಿರೇಮಠ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ತಾಪಂ ಸಹಾಯಕ ನಿರ್ದೇಶಕ ಪಂಡಿತ್ ಶಿಂಧೆ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರೆ, ಪಶು ವೈದ್ಯಾಧಿಕಾರಿ ಡಾ. ಶಂಕರ ಕಣ್ಣಿ, ಟಿಪಿಒ ಶಿವಶರಣಪ್ಪ ಮಂಠಾಳೆ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಗದೀಶ್ ಚವ್ಹಾಣ, ಮಲ್ಲಿಕಾರ್ಜುನ ಸೇಡಂ, ಅರುಣ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

