ಚಿತ್ತಾಪುರದಲ್ಲಿ ಮಾ.6 ರಂದು ಸರ್ಕಾರಿ ನೌಕರರ ಸಂಘದ ಮಹಾಸಭೆ: ಬಳೂಂಡಗಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ರೈಲ್ವೆ ಸ್ಟೇಷನ್ ಹತ್ತಿರದ ಪಶುಪಾಲನೆ ಇಲಾಖೆ ಸಭಾಂಗಣದಲ್ಲಿ ಮಾ.6 ರಂದು ಮಧ್ಯಾಹ್ನ 1.30 ಕ್ಕೆ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.
ಸಭೆಯಲ್ಲಿ ಸಂಘದ ಕಾರ್ಯಕಲಾಪಗಳ ವರದಿ ಮಂಡನೆ, ಸಂಘದ ಲೆಕ್ಕಪತ್ರಗಳ ಅಡಿಟ್ ವರದಿ ಮಂಡನೆ, ವಿವಿಧ ಇಲಾಖೆಗಳ ಪ್ರತಿನಿಧಿಗಳ, ಪದಾಧಿಕಾರಿಗಳ ನೇಮಕ ಪ್ರಮಾಣ ಪತ್ರ ವಿತರಣೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಅದಕ್ಕಾಗಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಚುನಾಯಿತ, ನಾಮನಿರ್ದೇಶಿತ ಪದಾಧಿಕಾರಿಗಳು, ಸರ್ವ ಸದಸ್ಯರು, ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ವಿವಿಧ ಇಲಾಖೆಯ ನೌಕರರು ಮತ್ತು ಶಿಕ್ಷಕರು ತಪ್ಪದೇ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

