ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ಗುರುವಾರ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು.
ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಬೇಕು ಎಂದು ತಹಸೀಲ್ದಾರ್ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್, ವಿಠಲ್ ರಾವ್, ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ಮೊಗಲಾ, ಗೌರವಾಧ್ಯಕ್ಷ ರಾಮಲಿಂಗ ಮೊಗಲಾ, ಪ್ರಧಾನ ಕಾರ್ಯದರ್ಶಿ, ಗುರು ವಾರಿಕ್, ಕಾರ್ಯಧ್ಯಕ್ಷ ಮಹಾಂತೇಶ್ ಚವನಿಕರ್, ಸದಸ್ಯರಾದ ಸೀನು ಮದನಕರ್, ಸಚಿನ್ ಮೊಗಲ್, ಮರಿಯಪ್ಪ ಸನ್ನತ್ತಿ, ವೀರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಿದ್ದರು.