Oplus_131072

ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಚಿತ್ತಾಪುರದಲ್ಲಿ ಜೂ. 17 ರಿಂದ ಉಚಿತ ಯೋಗ ಶಿಬಿರ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ 2025ರ ಅಂಗವಾಗಿ, ಪತಂಜಲಿ ಯೋಗ ಸಮಿತಿ ಹಾಗೂ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಚಿತ್ತಾಪುರ ಸಹಯೋಗದಲ್ಲಿ ಐದು ದಿನಗಳ ಉಚಿತ ಯೋಗ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಸಮಿತಿ ಅಧ್ಯಕ್ಷ ವೀರಣ್ಣ ಶಿಲ್ಪಿ ತಿಳಿಸಿದ್ದಾರೆ.

ಪಟ್ಟಣದ ಯರಗಲ್ ರಸ್ತೆಯ ವಿದ್ಯಾನಿಕೇತನ ಪ್ರೌಢ ಶಾಲೆಯ ಮೈದಾನದಲ್ಲಿ ಜೂನ್ 17 ರಿಂದ 21 ರವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ (ಶಿಷ್ಠಾಚಾರದ ಪ್ರಕಾರ) ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾನಿಕೇತನ ಶಾಲೆಯ ಮಕ್ಕಳ ಜೊತೆಗೆ, ಚಿತ್ತಾಪುರದ ಯೋಗಾಸಕ್ತರು, ಯೋಗ ಸಾಧಕರು ಮತ್ತು ವಿದ್ಯಾರ್ಥಿಗಳ ಪಾಲಕರಿಗೂ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ತಮ್ಮ ಯೋಗ ಆಸನಗಳನ್ನು ತರಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 8762236548 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಿಲ್ಪಿ ಅವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!