ಚಿತ್ತಾಪುರ ಪಟ್ಟಣದಲ್ಲಿ ವ್ಯಕ್ತಿಯೋರ್ವನ ಕೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರು ಗಡೆ ಇರುವ ಲಕ್ಷ್ಮೀ ಅಟೋಮೊಬೈಲ್ ಅಂಗಡಿ ಹತ್ತಿರ ವ್ಯಕ್ತಿಯೋರ್ವನ ಕೊಲೆಯಾಗಿರುವ ವಿಷಯ ಭಾನುವಾರ ಬೆಳಿಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.
ಘಟನೆ ತಿಳಿಯುತ್ತಿದ್ದಂತೆ ಪತ್ತೆ ಕಾರ್ಯ ಕೈಗೊಂಡಿದ್ದು ಲಾಡ್ಜಿಂಗ್ ಕ್ರಾಸ್ ಹತ್ತಿರದ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರೀಶೀಲಿಸಿದ್ದು ಈಗಾಗಲೇ ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ನಡೆಯುತ್ತಿದೆ. ಆದರೆ ಕೊಲೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಪಿಎಸ್ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ.