ನೂತನ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ ಅವರಿಂದ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಚಿಂಚೋಳಿ ಮತಕ್ಷೇತ್ರದ ಪರಾಜಿತ ಅಭ್ಯರ್ಥಿ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ ಅವರು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಹೂ ಗುಚ್ಛ ನೀಡಿ ಶುಭಾಶಯಗಳು ಹೇಳಿದರು.
ನಂತರ ಕೆಪಿಸಿಸಿ ನೂತನ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ, ಗೃಹ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರನ್ನು ಗೌರವಪೂರ್ವಕವಾಗಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ಸದರಿ ಭೇಟಿ ವೇಳೆ, ರಾಜ್ಯದ ಅಭಿವೃದ್ಧಿ, ಸಾರ್ವಜನಿಕ ಹಿತಾಸಕ್ತಿ ಹಾಗೂ ಪಕ್ಷದ ಸಂಘಟನಾ ಬಲವರ್ಧನೆ ಕುರಿತು ಸೌಹಾರ್ದಯುತ ಚರ್ಚೆ ನಡೆಯಿತು. ಈ ವೇಳೆ ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಸವರಾಜ ರಾಠೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

