ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ, ಚಿತ್ತಾಪುರ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಿಲ್ಲ: ಭೀಮಣ್ಣ ಸಾಲಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾನೆ ಹೊರತು ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಈಗಾಗಲೇ 17 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ, ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದೇನೆ. ಹೀಗಾಗಿ ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದರು.  ಪ್ರಸ್ತುತ ಚಿತ್ತಾಪುರ ಬ್ಲಾಕ್ ಗೆ ಬೇರೆ ಯಾರಿಗಾದರೂ ಅವಕಾಶ ನೀಡಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಅದಕ್ಕೆ ಸಹಮತವಿದೆ ಎಂದು ತಿಳಿಸಿದರು.

ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಹಲವರು ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ಹೈಕಮಾಂಡ್ ಯಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಾರೋ ಅವರಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!