Oplus_0

ಕಾಂಗ್ರೆಸ್ ಪಕ್ಷದ ನಾಯಕರಿಗೆ, ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ  ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ ರಾಜ್ಯದ ಗೃಹ ಇಲಾಖೆ, ಐಟಿಬಿಟಿ ಇಲಾಖೆ ಹಾಗೂ ಇ-ಆಡಳಿತ ಇಲಾಖೆಗಳ ಸಚಿವನಾಗಿ ಕೆಲಸ ಮಾಡುವ ಮಹತ್ವದ ಜವಾಬ್ದಾರಿಯನ್ನು ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ, ರಣದೀಪ್ ಸುರ್ಜೆವಾಲ ರವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ನೂತನ ಗೃಹ, ಐಟಿ-ಬಿಟಿ ಹಾಗೂ ಇ- ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಶೇಷವಾಗಿ, ನನಗೆ ಸತತವಾಗಿ ಆಶೀರ್ವದಿಸಿ ನಿರಂತರವಾಗಿ ಬೆಂಬಲಿಸುತ್ತಾ ಬಂದಿರುವ ಚಿತ್ತಾಪುರ ಕ್ಷೇತ್ರ ಮತ್ತು ಕಲಬುರ್ಗಿ ಜಿಲ್ಲೆಯ ಜನರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನನ್ನ ಅನಂತಾನಂತ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಬುದ್ದ-ಬಸವಣ್ಣ-ಅಂಬೇಡ್ಕರ್ ರ ಆಶಯಗಳಂತೆ ಕರ್ನಾಟಕವನ್ನು ಪ್ರಬುದ್ಧ ಸಮಾಜವಾಗಿಸುವ ನನ್ನ ಪ್ರಾಮಾಣಿಕ ಪ್ರಯತ್ನದಲ್ಲಿ ರಾಜ್ಯದ ಎಲ್ಲರ ಆತ್ಮೀಯ ಸಹಕಾರವನ್ನು ಕೇಳಿಕೊಳ್ಳುತ್ತೇನೆ.

Spread the love

Leave a Reply

Your email address will not be published. Required fields are marked *

You missed

error: Content is protected !!