ಕೋವಿಡ್-19 ಹಗರಣ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಉಪಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಕೋವಿಡ್-19. ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ಯದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು, ಅದರ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಕೆಳಗಿನಂತೆ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಉಪ ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್ (ಅಧ್ಯಕ್ಷರು) ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ (ಸದಸ್ಯರು)