ಭೀಮನಳ್ಳಿ ಸಿಆರ್’ಪಿ ವಿಜಯಲಕ್ಷ್ಮೀ ಹೊಸಮನಿ ಅವರಿಗೆ ಸಾಧಕಿ ಪ್ರಶಸ್ತಿ ಪ್ರದಾನ: ಚಿಂಚನಸೂರ್ ಹರ್ಷ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಶಿಕ್ಷಣ ಇಲಾಖೆಯ ಭೀಮನಳ್ಳಿ ಕ್ಲಸ್ಟರ್ನ ಸಿಆರ್’ಪಿ ವಿಜಯಲಕ್ಷ್ಮೀ ಹೊಸಮನಿ ಅವರಿಗೆ ಉತ್ತಮ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಚಿಂಚನಸೂರ ಹಾಗೂ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ತಮ್ಮ ಕರ್ತವ್ಯನಿಷ್ಠೆ, ಪರಿಶ್ರಮ, ಪ್ರಾಮಾಣಿಕ ಸೇವೆ ಹಾಗೂ ಉತ್ತಮ ಕಾರ್ಯನಿರ್ವಹಣೆಗೆ ಸಂದ ಈ ಗೌರವವು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಮಾಡಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಹಾಗೂ ಪ್ರೋತ್ಸಾಹ ಹಾಗೂ ಸಹಕಾರ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರಿಗೆ ಕೃತಜ್ಞತೆಗಳು ಸಲ್ಲಿಸಿದ್ದಾರೆ.

