Oplus_0

ದಲಿತ ಸಂಘಟನೆಗಳಿಗೆ ಪಥ ಸಂಚಲನಕ್ಕೆ ಬೇರೆ ದಿನ ಅವಕಾಶ ಕೊಡಿ: ಅಂಬಾರಾಯ ಅಷ್ಠಗಿ ಒತ್ತಾಯ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಆರ್‌ಎಸ್‌ಎಸ್ ಸಂಘಟನೆಗೆ ನೂರು ವರ್ಷಗಳ ಪೂರ್ಣಗೊಳಿಸಿದ ಪ್ರಯುಕ್ತ ದೇಶಾದ್ಯಂತ ಪಥ ಸಂಚಲನ ನಡೆಸುತ್ತಿದೆ ಅದೇ ನಿಟ್ಟಿನಲ್ಲಿ ಚಿತ್ತಾಪುರನಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಅವಕಾಶ ನೀಡಬೇಕು ಜೊತೆಗೆ ವಿವಿಧ ದಲಿತ ಸಂಘಟನೆಗಳಿಗೆ ಬೇರೆ ಬೇರೆ ದಿನ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಡಾ. ಅಂಬರಾಯ ಅಷ್ಠಗಿ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಲಬುರಗಿ ಜಿಲ್ಲೆ ಶರಣ ಸೂಪಿ ಸಂತರ ನಾಡು ಇದು ಶಾಂತಿ ಮತ್ತು ಸಹಬಾಳ್ವೆಯಿಂದ ಕೂಡಿದ ನಾಡಾಗಿದೆ, ಈ ನಾಡಿನಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ, ಅಲ್ಲದೆ ಆರ್‌ಎಸ್‌ಎಸ್ ಸಂಘಟನೆಯ ಪಥ ಸಂಚಲನ ನಡೆಸುವ ದಿನವೇ ವಿವಿಧ ದಲಿತ ಸಂಘಟನೆಗಳು ಪಥ ಸಂಚಲನಕ್ಕೆ ಅವಕಾಶ ಕೇಳುತ್ತಿರುವುದು ಸರಿಯಲ್ಲವೆಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಿಯಾಂಕ್ ಖರ್ಗೆಯವರಿಗೆ ಮಾಡಲು ಸಾಕಷ್ಟು ಕೆಲಸಗಳಿವೆ, ಕಲಬುರಗಿಯಲ್ಲಿ ಮಳೆಯಿಂದಾಗಿ ಸಾಕಷ್ಟು ಬೆಳೆ, ಮನೆ ಆಸ್ತಿಪಾಸ್ತಿಗಳು ಹಾಳಾಗಿ ರೈತರು ಸಂಕಷ್ಟದಲ್ಲಿದ್ದಾರೆ, ಅವರಿಗೆ ನೆರವಿಗೆ ಬರುವುದನ್ನು ಬಿಟ್ಟು ಸಂಘಟನೆಗಳ ಬಗ್ಗೆ ಮಾತನಾಡಿ ವಿವಾದಕ್ಕೆ ಎಡೆಮಾಡಿಕೊಡಬಾರದು, ಹಿರಿಯ ರಾಜಕಾರಣಿಗಳಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆಯವರು ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ದೇಶದ ಉನ್ನತ ಸ್ಥಾನಕ್ಕೆರಿದ್ದಾರೆ, ಆದರೆ ಅವರ ಮಾರ್ಗದರ್ಶನದಲ್ಲಿ ನಡೆಯಬೇಕಾಗಿದ್ದ ಪ್ರಿಯಾಂಕ್ ಖರ್ಗೆಯವರು ಸುಖಾಸುಮ್ಮನೆ ವಿವಾದ ಎಬ್ಬಿಸುವುದನ್ನು ಬಿಟ್ಟು ಕಲಬುರಗಿ ಅಬಿವೃದ್ದಿಗೆ ಒತ್ತು ನೀಡಬೇಕೆಂದು ಒತ್ತಾಯಿಸಿದರು.

ಎಐಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಕೂಡಲೇ ಮಧ್ಯಸ್ಥಿಕೆ ವಹಿಸಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮಾರ್ಗದರ್ಶನ ಮಾಡಿ ವಿವಾದಕ್ಕೆ ತೆರೆ ಎಳೆಯಬೇಕೆಂದು ಸಲಹೆ ನೀಡಿದರು.

ಮಾಜಿ ಮೇಯರ್ ವಿಶಾಲ ಧರ್ಗಿ ಮಾತನಾಡಿ, ಪ್ರತಿಷ್ಠಿತ ಸ್ಥಾನದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆಯವರು ಸಮಾಜದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಬಾರದು, ಯಾವುದೇ ಚಳುವಳಿಗಳು ವೈಯಕ್ತಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ನಡೆಯದಂತೆ ದಲಿತ ಸಂಘಟನೆಗಳು ಒತ್ತುಕೊಡಬಾರದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬಸವರಾಜ ಬೆಣ್ಣೂರಕರ್, ಮಲ್ಲಿಕಾರ್ಜುನ ಕುಸ್ತಿ, ಎಸ್.ಜಿ. ಭಾರತಿ, ಗಣೇಶ ವಳಕೇರಿ, ರವಿಚಂದ್ರ ವಂಟಿ, ಛತ್ರು ರಾಠೋಡ, ಸಂತೋಷ ಹಾದಿಮನಿ, ಶಿವಯೋಗಿ ನಾಗನಳ್ಳಿ ಸೇರಿದಂತೆ ಮತ್ತಿತರರಿದ್ದರು.

“ಜಿಲ್ಲೆಯಲ್ಲಿ ಎಲ್ಲರೂ ಸಹೋದರತ್ವದಿಂದ ಬಾಳುತ್ತಿದ್ದೇವೆ, ಆದರೆ ಸಚಿವ ಪ್ರಿಯಾಂಕ ಖರ್ಗೆ ಅವರು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ”.-ಡಾ ಅಂಬಾರಾಯ ಅಷ್ಠಗಿ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರು.

Spread the love

Leave a Reply

Your email address will not be published. Required fields are marked *

error: Content is protected !!