ಚಿತ್ತಾಪುರ ತಾಲೂಕು ದಲಿತ ಸೇನೆ ಯುವ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ದಲಿತ ಸೇನೆ ಯುವ ಘಟಕದ ತಾಲೂಕು ಅಧ್ಯಕ್ಷರನ್ನಾಗಿ ಅಬ್ದುಲ್ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನಲ್ಲಿ ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ದಿನ ದಲಿತರ, ಜನಸಾಮಾನ್ಯರ ನೋವಿಗೆ ಸ್ಪಂದಿಸಿ, ಅನ್ಯಾಯದ ವಿರುದ್ಧ ಹೋರಾಟ ರೂಪಿಸಿ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

