ದಂಡಗುಂಡ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಚವಳಪ್ಪ ಮೋನಪ್ಪ ಏಳನೇ ತರಗತಿ ವಿದ್ಯಾರ್ಥಿಯು 14 ವರ್ಷದ ಒಳಗಿನ ಬಾಲಕರ ವಿಭಾಗದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಮುಖ್ಯಗುರುಗಳು ತಿಳಿಸಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ದಂಡಗುಂಡ ಗ್ರಾಮದ ಗ್ರಾಮಸ್ಥರು, ಗ್ರಾಮ ಪಂಚಾಯತಿ ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ವಿದ್ಯಾರ್ಥಿಯ ಸಾಧನೆಗೆ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದಲ್ಲಿ ವಿದ್ಯಾರ್ಥಿ ಗೆಲುವು ಸಾಧಿಸಲಿ ಎಂದು ಹಾರೈಸಿದ್ದಾರೆ.