ದಂಡೋತಿ ಕಾಂಗ್ರೆಸ್ ಕಾರ್ಯಕರ್ತ ಸಾಬಣ್ಣ ಭರಾಟೆ ಯೋಗಕ್ಷೇಮ ವಿಚಾರಿಸಿದ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಅ.16 ರಂದು ಕರೆ ನೀಡಿದ ಚಿತ್ತಾಪುರ ಬಂದ್ ಪ್ರತಿಭಟನೆಯ ಸಂದರ್ಭದಲ್ಲಿ ದಂಡೋತಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಸಾಬಣ್ಣ ಭರಾಟೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ವಿಷಯ ತಿಳಿದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಶನಿವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ನಂತರ ಸಾಬಣ್ಣ ಭರಾಟೆ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಗೌರವಿಸಿ ಆಶೀರ್ವಾದ ಪಡೆದರು.
ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರಿಗೆ ಅವಾಚ್ಯವಾಗಿ ಹಾಗೂ ಅಶ್ಲೀಲ ಶಬ್ದಗಳಿಂದ ವೈಯಕ್ತಿಕವಾಗಿ ನಿಂದಿಸಿದ ಘಟನೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಅ.16 ರಂದು ಕರೆ ನೀಡಿದ ಚಿತ್ತಾಪುರ ಬಂದ್ ಪ್ರತಿಭಟನೆಯ ಸಂದರ್ಭದಲ್ಲಿ ದಂಡೋತಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಸಾಬಣ್ಣ ಭರಾಟೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ತಿಮ್ಮನಾಯಕ, ಅಜಿಮೋದ್ದಿನ್ ಯಾದಗಿರ, ರವಿ ಕೊಂಕನಳ್ಳಿ, ವಾಹೇದ್ ಸೇರಿದಂತೆ ಇತರರು ಇದ್ದರು.

