Oplus_0

ಡಂಡೋತಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಸುರಕ್ಷಿತ  | ಮಣಿಕಂಠ ರಾಠೋಡ ಎಲ್ಲಾ ಸಂದರ್ಭದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ: ಭರಾಟೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅರೆಬೆಂದ ಅನ್ನ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಅಧಿಕಾರಿಗಳು ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದರಿಂದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಾಬಣ್ಣ ಭರಾಟೆ ದಂಡೋತಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಶಾಲೆಯ ದುರ್ಘಟನೆ ವಿಷಯದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ತಮ್ಮ ಬಾಯಿ ಚಪಲಕ್ಕೆ ಈ ಘಟನೆಗೆ ಆಡಳಿತದ ವೈಫಲ್ಯ ಎಂದು ಆರೋಪಿಸಿದ್ದು ಸರಿಯಲ್ಲ ಎಲ್ಲಾ ಸಂದರ್ಭದಲ್ಲೂ ರಾಜಕೀಯ ಮಾಡುವುದು ಬಿಟ್ಟುಬಿಡಿ ಎಂದು ಕಿವಿಮಾತು ಹೇಳಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಯಾವತ್ತೂ ಜನರ ನಡುವೆ ಇರುವ ಜನನಾಯಕರಾಗಿದ್ದು, ವಿದ್ಯಾರ್ಥಿಗಳು ಅಸ್ವಸ್ಥಗೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿಯೇ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ತ್ವರಿತ ಗತಿಯಲ್ಲಿ ಕ್ರಮ ಕೈಗೊಂಡಿದ್ಥರಿಂದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವವರು ನೀವು ಹೊರತು ಸಚಿವ ಪ್ರಿಯಾಂಕ್ ಖರ್ಗೆ ಅಲ್ಲ ಎಂದು ಮಣಿಕಂಠ ರಾಠೋಡ ಗೆ ತಿರುಗೇಟು ನೀಡಿದ್ದಾರೆ. ಈಗಾಗಲೇ ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಅಲ್ಲದೇ ಜಿಲ್ಲಾಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!