Oplus_131072

ಕಲಬುರಗಿ ಡಿಸಿ ವಿರುದ್ಧ ಎನ್.ರವಿಕುಮಾರ್ ಅವರ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ತೀವ್ರ ಖಂಡನೆ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್‌ ಅವರು ನೀಡಿದ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೈರ್ಯ ಕುಸಿಯುವಂತಾಗುತ್ತದೆ ಹಾಗೂ ಮಾನಸಿಕ ಹಿಂಸೆ ನೀಡಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಸಿ ಬಿ.ಫೌಝಿಯಾ ತರನ್ನುಮ್ ಅವರು ಜಿಲ್ಲೆಯ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!