Oplus_0

ಡಿ.9 ರಂದು ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ: ಬಿರಾದಾರ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಮೋರಾರ್ಜಿ ದೇಸಾಯಿ ವಸತಿ ಶಾಲೆ (ಚಿತ್ತಾಪುರ ಟೌನ್) ಯಲ್ಲಿ ಡಿ. 9 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಎ. ಬಿರಾದಾರ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಮ್. ಖರ್ಗೆ ಉದ್ಘಾಟಿಸುವರು, ರಾಜ್ಯಸಭಾ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ, ಮುಖ್ಯ ಅತಿಥಿಗಳಾಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಬಸವರಾಜ ಮತ್ತಿಮೂಡ, ಡಾ. ಅವಿನಾಶ ಜಾಧವ,  ಬಿ.ಜಿ. ಪಾಟೀಲ, ಸುನೀಲ ವಲ್ಲಾಪೂರೆ, ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ, ಡಾ. ತಳವಾರ ಸಾಬಣ್ಣ, ತಿಪ್ಪಣ್ಣಪ್ಪ ಕಮಕನೂರ,  ಜಗದೇವ ಗುತ್ತೇದಾರ, ಕಾಡಾ ಅಧ್ಯಕ್ಷ ಡಾ. ರಶೀದ್ ಮರ್ಚಂಟ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ರಾಜ್ಯ ಬೆಳೆ ಕಾಳು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್ ಮೆಹಮೂದ್ ಚಿಸ್ತಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಅತಿಥಿಗಳಾಗಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ  ಬಸವರಾಜ ಬಳೂಂಡಗಿ ಸೇರಿದಂತೆ ಚಿತ್ತಾಪುರ, ಶಹಾಬಾದ ಮತ್ತು ಕಾಳಗಿ ತಾಲೂಕುಗಳ ವಿವಿಧ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!