ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು, ವಾಡಿ ಪಟ್ಟಣದಲ್ಲಿ ವಿಜಯೋತ್ಸವ
ನಾಗಾವಿ ಎಕ್ಸಪ್ರೆಸ್
ವಾಡಿ: ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಚೇರಿ ಮುಂದೆ ಮುಖಂಡರು ಪರಸ್ಪರ ಸಿಹಿಹಂಚಿ, ಜಯಘೋಷ ಕೂಗಿ ವಿಜಯೋತ್ಸವ ಆಚರಿಸಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿ ಬಿಜೆಪಿ ಇಂದ ಮಾತ್ರ ಸಾಧ್ಯ ಎಂದು ಅರಿತು ಪಕ್ಷವನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಿ ಮತದಾರರು ದೇಶಕ್ಕೆ ಅವರ ನಾಯಕತ್ವದ ಅವಶ್ಯಕತೆ ಇದೆ ಎಂದು ಸಾಬೀತು ಮಾಡಿದ್ದಾರೆ ಎಂದರು.
ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಈ ಗೆಲುವಿಗೆ ಕಾರಣರಾದ ನಮ್ಮ ರಾಷ್ಟ್ರ ನಾಯಕರಿಗೆ, ಪಕ್ಷದ ಅಭ್ಯರ್ಥಿಗಳಿಗೆ, ಮುಖಂಡರುಗಳಿಗೆ ಹಾಗೂ ಕಾರ್ಯಕರ್ತರಿಗೆ ವಾಡಿ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆಗಳು, ಈ ಗೆಲವು ನಮ್ಮೆಲ್ಲರಿಗೆ ಹೆಚ್ಚು ಸಂತಸ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಸಿದ್ದಣ್ಣ ಕಲ್ಲಶೆಟ್ಟಿ, ಗಿರಿಮಲ್ಲಪ್ಪ ಕಟ್ಟಿಮನಿ, ಅರ್ಜುನ ಕಾಳೆಕರ್, ಹರಿ ಗಲಾಂಡೆ, ಅಯ್ಯಣ್ಣ ದಂಡೋತಿ, ಆನಂದ ಇಂಗಳಗಿ, ಪ್ರೇಮ ರಾಠೊಡ, ಮಹಾಲಿಂಗ ಶೆಳ್ಳಗಿ, ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರಿ, ಆನಂದ ಶಿರವಾಳ, ದೇವೇಂದ್ರ ಬಡಿಗೇರ, ಹೀರಾ ನಾಯಕ, ದುರ್ಯೋಧನ ಜಾಧವ, ಚಂದ್ರಾಮ ಚವ್ಹಾಣ, ಆಕಾಶ ಚವ್ಹಾಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.