Oplus_0

ಚಿತ್ತಾಪುರ ತಾಲೂಕ ಮಟ್ಟದ ಒಕ್ಕೂಟ ಸದಸ್ಯರ ಸಮಾವೇಶ

ಸಮಸ್ಯೆಗಳಿಗೆ ಸ್ಪಂದಿಸುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ: ರಾವೂರ ಶ್ರೀ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ನಾಡಿನಲ್ಲಿ ಹಲವು ಜನಪರ, ಜೀವಪರ ಯೋಜನೆಗಳ ಮೂಲಕ ಜನರ, ಸಮುದಾಯದ ಸಮಸ್ಯೆಗಳಿಗೆ ಸ್ಪoದಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಧಿಪತಿ  ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.

ಮತಕ್ಷೇತ್ರದ ರಾವೂರ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಚಿತ್ತಾಪುರ ತಾಲೂಕ ಮಟ್ಟದ ಒಕ್ಕೂಟ ಸದಸ್ಯರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ನಾಡಿನ ಕಲ್ಯಾಣದ ಆಶಯ ಹೊಂದಿರುವ ಸಂಸ್ಥೆಯು ಮಹಿಳಾ ಸಬಲೀಕರಣ, ಚಟ ಮುಕ್ತ ಸಮಾಜ, ಆರೋಗ್ಯದ ಕಾಳಜಿ, ಪರಿಸರದ ಕಾಳಜಿ, ದೇವಸ್ಥಾನಗಳ ರಕ್ಷಣೆ, ಜೀರ್ಣೋದ್ಧಾರಗಳ ಮೂಲಕ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದರೆ ಅದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಸಂಪನ್ಮೂಲ ವ್ಯಕ್ತಿ ಸಿದ್ದಲಿಂಗ ಬಾಳಿ ಮಾತನಾಡಿ, ಸಮಾಜದ ಎಲ್ಲಾ ವರ್ಗದವರಿಗೆ ಯೋಜನೆಗಳನ್ನು ರೂಪಿಸಿದ್ದಾರೆ. ಜಾತಿ ಧರ್ಮದ ಭೇಧವಿಲ್ಲದೆ ಎಲ್ಲರೂ ಈ ಯೋಜನೆಗಳ ಲಾಭವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಸಂಸ್ಥೆಯ ಒಕ್ಕೂಟ ಸದಸ್ಯರು ಪ್ರತಿಯೊoದು ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರ ಕನಸುಗಳನ್ನು ಸಾಕಾರಗೊಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಸಂಸ್ಥೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ ಅವರು ಕಳೆದ ಎಂಟು ವರ್ಷಗಳಲ್ಲಿ ಸಂಸ್ಥೆಯು ಈ ಭಾಗದಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಹಾಗೂ ತಲುಪಿರುವ ಗುರಿಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ವೇದಿಕೆಯ ಮೇಲೆ ವಿಠ್ಠಲ್ ಕಟ್ಟಿಮನಿ, ಬ್ಯಾoಕ್ ಅಧಿಕಾರಿ ಕಿರಣ್ ಉಪಸ್ಥಿತರಿದ್ದರು. ತಾಲೂಕಿನ 60 ಒಕ್ಕೂಟದ 500 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

ತಾಲೂಕ ಯೋಜನಾಧಿಕಾರಿ ಗುರುರಾಜ ಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಮೇಲ್ವಿಚಾರಕ ಫಕೀರೇಶ್ ನಿರೂಪಿಸಿದರು, ವಲಯ ಮೇಲ್ವಿಚಾರಕಿ ಜಯಶ್ರೀ ವಂದಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!