ದಿಗ್ಗಾಂವ ಮಹಾದೇವಪ್ಪ ಶಿಲ್ಪಿ ನಿಧನ, ನಾಳೆ ಅಂತ್ಯಕ್ರಿಯೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದ ಹಿರಿಯ ಜೀವಿ, ಕರ್ನಾಟಕ ಶಿಲ್ಪಕಲಾ ಅಕಾಡಮಿ ಮಾಜಿ ಅಧ್ಯಕ್ಷರು ಹಾಗೂ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ (84) ಭಾನುವಾರ ನಿಧನರಾಗಿದ್ದು ನಾಳೆ ಸೋಮವಾರ ಮಧ್ಯಾಹ್ನ 2.30ಕ್ಕೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಯುತರು ಪತ್ನಿ, ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು, ಹದಿನೈದು ಜನ ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

