ದಿಗ್ಗಾಂವ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಖೋಖೋ ಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದ ಜಿಲ್ಲಾಮಟ್ಟದ ಖೋಖೋ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರವಿವಾರ ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಫೈನಲ್ ಪಂದ್ಯದಲ್ಲಿ ಜೇವರ್ಗಿ ತಂಡವನ್ನು ಸೋಲಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಯ್ತು.
ವಿದ್ಯಾರ್ಥಿಗಳ ಸಾಧನೆಗೆ ಎಸ್ ಡಿಎಂಸಿ ಅಧ್ಯಕ್ಷ ಗುರುಲಿಂಗಪ್ಪ ಬಂದಳ್ಳಿ, ಮುಖ್ಯ ಶಿಕ್ಷಕ ಮಹೇಶ ಬಾವಿಕಟ್ಟಿ, ದೈಹಿಕ ಶಿಕ್ಷಕ ದೇವೇಂದ್ರಪ್ಪ ದೊರೆ ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

