ದಿಗ್ಗಾಂವ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ನಗರದ ಶ್ರೀ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ದಿಗ್ಗಾಂವ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ಖೋಖೋ ಕ್ರೀಡೆಯಲ್ಲಿ ಜಯಶಾಲಿಯಾಗಿ ವಿಭಾಗ ಮಟ್ಟಕ್ಕೆ ಸತತವಾಗಿ ಮೂರನೇ ಬಾರಿಗೆ ಆಯ್ಕೆಯಾಗಿದೆ ಎಂದು ಮುಖ್ಯಶಿಕ್ಷಕಿ ಗೀತಾ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಳಯ್ಯ ಬಡಿಗೇರ್, ಉಪಾಧ್ಯಕ್ಷ ಜಗನ್ನಾಥ ಸೀದಾ, ತರಬೇತಿದಾರ ಮಹೇಶ್, ಜಗನ್ನಾಥ ಸೇರಿದಂತೆ ಸಹಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳು ಸಲ್ಲಿಸಿದ್ದಾರೆ.