ಡೋಣಗಾಂವ ಗ್ರಾಮದಲ್ಲಿ ಮೊಹರಂ ಹಬ್ಬದ ಶಾಂತಿ ಸಭೆ | ಶಾಂತಿ ಸೌಹಾರ್ದತೆಯಿಂದ ಮೊಹರಂ ಹಬ್ಬ ಆಚರಿಸಿ: ಡಿವೈಎಸ್ಪಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು.
ತಾಲೂಕಿನ ಡೋಣಗಾಂವ ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲೇ ಡೋಣಗಾಂವ ಗ್ರಾಮದಲ್ಲಿ ಅತ್ಯಂತ ವೈಭವದಿಂದ ಆಚರಿಸುವ ಮೊಹರಂ ಹಬ್ಬಕ್ಕೆ ಯಾವುದೇ ರೀತಿಯ ದಕ್ಕೆ ಬಾರದಂತೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕೆಂದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಿಪಿಐ ಸಿದ್ದಬಸವನಗೌಡ ಪಾಟೀಲ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಶರಣು ಡೋಣಗಾಂವ, ಮುಖಂಡರಾದ ಮಲ್ಲಿಕಾರ್ಜುನ ಹೊನ್ನಪುರ, ಶರಣಪ್ಪ ಹೊನ್ನಪುರ, ಶರಣಗೌಡ ಪೊಲೀಸ್ ಪಾಟೀಲ, ಕಾಶಪ್ಪ ಡೋಣಗಾಂವ, ಶಿವಶರಣ ಮೆಂಗಾ, ಅಶೋಕ ಬಣರ್, ದೊಡ್ಡ ಕಾಶಪ್ಪ, ಸಿಬ್ಬಂದಿಗಳಾದ ವಿಠ್ಠಲ್ ಬಿರಾದಾರ, ದತ್ತು ಜಾನೆ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

