ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾನ ಚುರುಕು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಭೇಟಿ | ಬಿಜೆಪಿ, ಕಾಂಗ್ರೆಸ್ ಮುಖಂಡರು ಠಿಕಾಣಿ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಶುಕ್ರವಾರ ಪಟ್ಟಣದ ಪ್ರಜಾ ಸೌಧದಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾವಣೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಮತಗಟ್ಟೆಗೆ ಭೇಟಿ ನೀಡಿ, ಚುನಾವಣೆ ಪ್ರಕ್ರಿಯೆಯನ್ನು ವೀಕ್ಷಿಸಿದರು. ನಂತರ ಟೆಂಟಿನಲ್ಲಿ ಕುಳಿತು ಕಾಂಗ್ರೆಸ್ ಮುಖಂಡರ ಬಳಿ ಹೋಗಿ ವಾತಾವರಣ ಕುರಿತು ಚರ್ಚಿಸಿದರು. ಇದೇ ವೇಳೆ ಮಾತನಾಡಿದ ಅವರು, ಈ ಬಾರಿ ಎಲ್ಲಾಕಡೆ ಉತ್ತಮ ವಾತಾವರಣ ಇದೆ, ಶಿಕ್ಷಕ ಮತದಾರರು ನನ್ನ ಕೈಹಿಡಿಯುವ ವಿಶ್ವಾಸವಿದೆ ಎಂದು ಹೇಳಿದರು.

ಮತಗಟ್ಟೆಯ 100 ಅಂತರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಟೆಂಟ್ ಹಾಕಿ ಕುಳಿತುಕೊಳ್ಳುವ ಮೂಲಕ ಶಿಕ್ಷಕರಿಗೆ ಮಾಹಿತಿ ನೀಡುವ ಜೊತೆಗೆ ಅಂತಿಮ ಹಂತದ ಮನವರಿಕೆ ಮಾಡುವ ಪ್ರಯತ್ನವನ್ನು ಮಾಡುತ್ತಿರುವುದು ಕಂಡುಬಂತು.

ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದ್ದು, ನಂತರ ಸ್ವಷ್ಟ ಶೇ.ಮತದಾನದ ಮಾಹಿತಿ ತಿಳಿಯಲಿದೆ.

Spread the love

Leave a Reply

Your email address will not be published. Required fields are marked *

You missed

error: Content is protected !!