Oplus_0

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ | ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆ ಶಿಕ್ಷಕ ಮತದಾರರು ಬೆಂಬಲಿಸಿ ಗೆಲ್ಲಿಸಿ: ಸಜ್ಜನಶೆಟ್ಟಿ ಮನವಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಅನುಭವ ಇರುವ ಹಾಗೂ ಶಿಕ್ಷಕರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರನ್ನು ಶಿಕ್ಷಕ ಮತದಾರರು ಬೆಂಬಲಿಸಿ ಗೆಲ್ಲಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮನವಿ ಮಾಡಿದರು.

ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಶೀಲ್ ನಮೋಶಿ ಅವರು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶಾಲಾಕಾಲೇಜುಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದಾರೆ. ಅಷ್ಟೇ ಅಲ್ಲ ಶಿಕ್ಷಕರ ಬೇಡಿಕೆಗಳ ಮತ್ತು ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸಾಕಷ್ಟು ಬಾರಿ ಧ್ವನಿ ಎತ್ತಿದ್ದಾರೆ ಎಂದು ಹೇಳಿದರು.

ಈಗಾಗಲೇ ಕಳೆದ ಒಂದು ತಿಂಗಳಿನಿಂದ ಚಿತ್ತಾಪುರ ತಾಲೂಕಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸ್ವತಃ ಶಶೀಲ್ ನಮೋಶಿ ಹಾಗೂ ಎಂಎಲ್ಸಿ ಎನ್.ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಸೇರಿದಂತೆ ಇತರೆ ಜಿಲ್ಲಾ ನಾಯಕರು ಭೇಟಿ ನೀಡಿ ಶಿಕ್ಷಕ ಮತದಾರರಲ್ಲಿ ಮನವಿ ಮಾಡಿದ್ದಾರೆ, ಹೀಗಾಗಿ ಎಲ್ಲೆಡೆ ಉತ್ತಮ ವಾತಾವರಣವಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 139 ನೇ ಮನ್ ಕೀ ಬಾತ್ ಕಾರ್ಯಕ್ರಮ ಈ ಬಾರಿ ಚಿತ್ತಾಪುರ ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿ.25 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಅಂದು ಡೈರೆಕ್ಟ್ ಲೈವ್ ಕ್ಯಾಸ್ಟ್ ನಲ್ಲಿ ಪ್ರಸಾರ ಆಗಲಿದೆ ಇದಕ್ಕಾಗಿ ದೊಡ್ಡ ಪರದೆಯ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಚಿತ್ತಾಪುರದಲ್ಲಿ ನಡೆಯುವುದಕ್ಕೆ ಅವಕಾಶ ನೀಡಿದ ಜಿಲ್ಲಾಧ್ಯಕ್ಷರಿಗೆ ಇದೇ ಸಂದರ್ಭದಲ್ಲಿ ಕೃತಜ್ಞತೆಗಳು ಸಲ್ಲಿಸಿದರು.

ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಮಾತನಾಡಿ,  ಈ ಭಾಗದ ಶಿಕ್ಷಣದ ಹಾಗೂ ಶಿಕ್ಷಕರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಶಶೀಲ್ ನಮೋಶಿ ಅವರಿಗೆ ಶಿಕ್ಷಕ ಪ್ರಬುದ್ಧ ಮತದಾರರು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದಿಲ್ಲ, ಗೊತ್ತಿಲ್ಲದ ವಿಷಯಗಳನ್ನು, ಪ್ರತಿಭೆಯನ್ನು, ಸಾಧನೆಗಳನ್ನು ಇಡೀ ದೇಶಕ್ಕೆ ಪರಿಚಯಿಸುವ ಮೂಲಕ ಉತ್ತಮ ಸಂದೇಶ ನೀಡುವುದಾಗಿದೆ, ಹೀಗಾಗಿ ಈ ಭಾಗದ ಮಾಜಿ ಸೈನಿಕರು, ಡಾಕ್ಟರ್ ಇಂಜಿನಿಯರ್ಸಗಳು, ವಕೀಲರು, ಶಿಕ್ಷಕರು, ಪತ್ರಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಟಗಾ ಮಾತನಾಡಿ, ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಶಶೀಲ್ ನಮೋಶಿ ಪರ ಉತ್ತಮ ವಾತಾವರಣ ಇದೆ. ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ ಅಧಿವೇಶನದಲ್ಲಿ ಶಿಕ್ಷಕರ ಧ್ವನಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ, ಹೀಗಾಗಿ 5 ನೇ ಬಾರಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶಿಕ್ಷಕ ಮತದಾರರು ನಿರ್ಣಯಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಭೀಮರೆಡ್ಡಿ ಕುರಾಳ, ಅಣ್ಣಾರಾವ್ ಬಾಳಿ, ಮಲ್ಲಿಕಾರ್ಜುನ ಎಮ್ಮೆನೋರ, ಗಿರೀಶ್ ಭಜಂತ್ರಿ, ಆನಂದ ಪಾಟೀಲ ನರಿಬೋಳ, ನಾಗರಾಜ ಭಂಕಲಗಿ, ಶಾಂತಕುಮಾರ್ ಮಳಖೇಡ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ವೀರಣ್ಣ ಯಾರಿ, ಸಂಗಮೇಶ ಪಾಟೀಲ, ಶಿವರಾಮ್ ಚವ್ಹಾಣ ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!