ಗೌರವ ಡಾಕ್ಟರೇಟ್ ಪಡೆದ ಅಮರೇಶ್ವರಿ ಚಿಂಚನಸೂರ ಅವರಿಗೆ ಗುತ್ತೇದಾರ ಅವರಿಂದ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ವಿಶ್ವವಿದ್ಯಾಲಯ ಅಂತರರಾಷ್ಟ್ರೀಯ ಮಾನ್ಯತೆ ಸಂಸ್ಥೆ (ಲಾವೋ) ಯುಎಸ್ಎ ವತಿಯಿಂದ ಶಿಕ್ಷಣ ಮತ್ತು ಕೈಗಾರಿಕೋದ್ಯಮ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದ ಅಮರೇಶ್ವರಿ ಬಾಬುರಾವ್ ಚಿಂಚನಸೂರ ಅವರಿಗೆ ಚಿತ್ತಾಪುರ ಪುರಸಭೆ ಸದಸ್ಯ ಖ್ಯಾತ ಉದ್ಯಮಿ ವಿನೋದ ಗುತ್ತೇದಾರ ಅವರು ಸನ್ಮಾನಿಸಿ ಗೌರವಿಸಿದರು.
ಶಿಕ್ಷಣ ಮತ್ತು ಕೈಗಾರಿಕೋದ್ಯಮ ಕ್ಷೇತ್ರದಲ್ಲಿ ಅಮರೇಶ್ವರಿ ಬಾಬುರಾವ್ ಚಿಂಚನಸೂರ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿರುವ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ವಿಶ್ವವಿದ್ಯಾಲಯ ಅವರಿಗೆ ಈ ಮೂಲಕ ಕೃತಜ್ಞತೆಗಳು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಇದ್ದರು.