ಚಿತ್ತಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆ ಚಿತ್ತಾಪುರ ತಾಲೂಕು ಘಟಕದ ನೇತೃತ್ವದಲ್ಲಿ ನೌಕರರು ತಹಸೀಲ್ ಕಚೇರಿ ಎದುರುಗಡೆ ಗುರುವಾರ ಪ್ರತಿಭಟನೆ ನಡೆಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದು ಮನವಿ ಪತ್ರವನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.
ಮೋಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17 ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದ್ದು, ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ. ಆದ್ದರಿಂದ ನಮಗೆ ಮೇಲ್ಕಂಡಂತೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ ಟಾಪ್/ಗೂಗಲ್ ಕ್ರೋಮ್ ಒದಗಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಒತ್ತಾಯಿಸಿದ್ದಾರೆ.
ಬಗರ್ ಹುಕುಂ ಹಕ್ಕುಪತ್ರ ಮೂನೆ 1-5 ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆಪ್, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಲ್ಲಿ ವಂಚಿತರಾಗಿ ಸುಮಾರು 30 ವರ್ಷಗಳ ಮೇಲ್ಮಟ್ಟು ಪದೋನ್ನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿರುವುದರಿಂದ, ರಾಜ್ಯಾದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ಚಿತ್ರಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು ಎಂದರು.
ಅಂತರ್ ಜಿಲ್ಲಾ ಪತಿ ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು, ಕೆ .ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡಬೇಕು, ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಬೇಕು, ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ಪರಿಗಣಿಸಬೇಕು, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದು ಪಡಿಸಿ ಹಿಂಪಡೆಯಬೇಕು, ಪ್ರಯಾಣ ಭತ್ಯೆ ದರವನ್ನು 500 ರೂಗಳಿಂದ 3000 ರೂಗಳಿಗೆ ಹೆಚ್ಚುವರಿ ಮಾಡಬೇಕು, ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಈ ಎಲ್ಲಾ ಬೇಡಿಕೆಗಳು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಸಂಘದ ಜಿಲ್ಲಾಧ್ಯಕ್ಷ ಮೋತಿಲಾಲ್, ತಾಲೂಕು ಅಧ್ಯಕ್ಷ ಸುನೀಲ್ ಚವ್ಹಾಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ಗ್ರಾಮ ಆಡಳಿತಾಧಿಕಾರಿಗಳಾದ ವೆಂಕಟಪ್ಪ, ಮಾರುತಿ, ಮೈನೋದ್ದಿನ್, ರಾಜು, ಮಹಾಂತೇಶ್, ಶೇಖಪ್ಪ, ಸಂಗಮೇಶ, ಪರಿಮಳ, ಶೇಖಪ್ಪ, ನಾಗಣ್ಣ, ವಸಂತ ರಾಜ್, ಸುಭಾಷ್, ಭುವನೇಶ್ವರಿ, ಹಾಲಮ್ಮ, ಮಲ್ಲಮ್ಮ, ಪೂಜಾ, ಸಿದ್ದಮ್ಮ, ವಿಜಯಕುಮಾರ್, ಶರಣು ಕುಂಬಾರ, ಅನೀಲಕುಮಾರ, ಜ್ಯೋತಿ, ಮೈಮುನಿಸಾ, ಶಶಿಕಲಾ, ರೇಷ್ಮಾ, ಬಸವರಾಜ, ಸಲೀಂ, ಅಮರೇಶ, ಶ್ವೇತಾ, ಹಜರತ್, ಪರಶುರಾಮ ಇದ್ದರು.